March 14, 2025

ಕಾಫಿ ತೋಟದಲ್ಲಿ ಒಂಟಿ ಸಲಗ ಸಾವು.

Spread the love

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದೆ.
ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಈ ಆನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು. ಇಲಾಖೆ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ತನಿಖೆ ಮಾಡಿ ಪ್ರಕರಣ ದಾಖಲು ಮಾಡಬೇಕು ಎಂದು ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಮೂಡಿಗೆರೆ, ಆಲ್ದೂರು ಸುತ್ತಮುತ್ತ ಆನೆ ಮಾನವ ಸಂಘರ್ಷ ತಾರಕಕ್ಕೆ ಏರುತ್ತಿದ್ದು, ಈ ಸಂದರ್ಭದಲ್ಲಿ ಆನೆ ಸವಾಪ್ಪಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.