March 14, 2025

ಹುಬ್ಬಳ್ಳಿ:  ಪೊಲೀಸ್ ಕಾನ್ಸ್ಟೇಬಲ್ ಜೊತೆ ಮಹಿಳೆ ಆತ್ಮಹತ್ಯೆಗೆ ಶರಣು,!!?

Spread the love
ಮಹೇಶ್ ಹೆಸರೂರ್

ಹುಬ್ಬಳ್ಳಿ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.

ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಮಹೇಶ ಹೆಸರೂರು ಹಾಗೂ ಮಹಿಳೆ ಇಬ್ಬರೂ ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ.ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದು ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.

ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಜೊತೆ ಮಹೇಶ್ ರವರು ಅನೈತಿಕ  ಸಂಬಂಧ ಒಂದಿದ್ದರೂ ಎಂದು ತಿಳಿದು ಬಂದಿದೆ.