March 14, 2025

S.S.L.C ಪಾಸಾದ ವಿದ್ಯಾರ್ಥಿಗೆ ವರ್ಗಾವಣೆ ಪತ್ರ (T C) ಕೊಟ್ಟಿಲ್ಲವೆಂದು ಅತ್ಮಹತ್ಯೆ ಗೆ ಶರಣಾಗಿದ್ದಾನೆ..!?

Spread the love


ಉಡುಪಿ: ಟಿಸಿ ಕೊಟ್ಟಿಲ್ಲ ಎಂದು ಬೇಸರಗೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.



ಬೈಂದೂರು ಸರಕಾರಿ ಪ್ರೌಢಶಾಲೆಯ 10 ನೇ ತರಗತಿ ಪಾಸಾದ ವಿದ್ಯಾರ್ಥಿ ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.  ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಪಿಯುಸಿ ಸೇರ್ಪಡೆಗಾಗಿ ಟಿಸಿ ಪಡೆಯಲು ಶಾಲೆಗೆ ತೆರಳಿದ್ದನು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಆತನನ್ನು ಬೈದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಇದರಿಂದ ಬೇಸರಗೊಂಡ ನಿತಿನ್‌ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಉಡುಪಿಯ ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಗಿದೆ. ತನಿಖೆಯಲ್ಲಿ ನಿಕರವಾದ ಸತ್ಯ ಆಸಾತ್ಯತೆ ತಿಳಿದು ಬರಬೇಕಿದೆ.