
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ, ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ, ಆಕ್ರೋಶಗೊಂಡ ಅನ್ಯಕೋಮಿನ ಯುವಕರ ಗುಂಪೊಂದು ಅಭಿಲಾಷ್ ಎಂಬ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ.

ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೆನು ಗುಂಪು ಹಲ್ಲೆ ಮಾಡಿದೆ, ಅಷ್ಟೇ ಅಲ್ಲದೆ, ಹಿಂದೂಗಳ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದಾರೆ.
ಈ ಘಟನೆಯಿಂದಾಗಿ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.ಹಲ್ಲೆಯಿಂದ ಗಾಯಗೊಂಡ ಅಭಿಲಾಷ್ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಳಿಕ, ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಪ್ರಕಾರಣವನ್ನು ದಾಖಲಿಸಿ ಕೊಂಡಿದ್ದಾರೆ. ✍️✍️