ತುಮಕೂರು :

ಹೆಮಾವತಿ ಎಕ್ಸ್‌ಪ್ರೆಸ್ ಕನೆಲ್ ವಿರೋಧಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿವಾಸದ ಮುಂದೆ ನಡೆಸಲು ನಿರ್ಧರಿಸಿದ್ದ ಪ್ರತಿಭಟನೆಯನ್ನು ನಿರ್ದಿಷ್ಟಗೊಳಿಸಲು ಹೆಚ್ಚಿನ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ. ಈ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಸಚಿವ ಸೊಗಡು ಶಿವಣ್ಣ ಅವರು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿವಾಸದ ಮುಂದೆ ನಡೆಯಲಿರುವ ಪ್ರತಿಭಟನೆಯನ್ನು ಪೂರ್ವಸಿದ್ದತೆಗಾಗಿ ಪರಿಶೀಲನೆ ನಡೆಸಲು ತೆರಳಿದ ಸಂದರ್ಭದಲ್ಲಿ, ಪೊಲೀಸರು ಅವರನ್ನು ಬಂಧಿಸಿ ಡಿ ಏ ಆರ್ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.
ಹೆಮಾವತಿ ಎಕ್ಸ್‌ಪ್ರೆಸ್ ಕನೆಲ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಸೊಗಡು ಶಿವಣ್ಣ, ರೈತರ ಪರವಾಗಿ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದಾರೆ. ಈ ಯೋಜನೆಯು ರೈತರ ಬದುಕಿಗೆ ಭಾರಿ ಹೊಡೆತ ನೀಡುತ್ತದೆ ಎಂಬ ಅಭಿಪ್ರಾಯ ಹೊಂದಿರುವ ಅವರು, ಸರ್ಕಾರದ ನಿರ್ಧಾರವನ್ನು ವಿರೋಧಿಸಲು ಈ ಪ್ರತಿಭಟನೆಯನ್ನು ಸಂಘಟಿಸಿದ್ದರು.
ಸಮಾಜದಲ್ಲಿ ಸರ್ಕಾರದ ನೀತಿಗಳನ್ನು ವಿರೋಧಿಸುವ ಅಧಿಕಾರ ಮತ್ತು ಹಕ್ಕುಗಳನ್ನು ಬಲಾತ್ಕಾರದಿಂದ ಅಡಗಿಸಲು ಈ ರೀತಿಯ ಬಂಧನಗಳನ್ನು ಬಳಸುವುದು ಅನ್ಯಾಯಕರ ಎಂಬ ವಾದ ಮುಂದಿಟ್ಟಿದ್ದಾರೆ. ✍️