
ಬೆಂಗಳೂರು :
ಜನತಾ ಕಾಲೋನಿಯಲ್ಲಿ ಲಿವಿಂಗ್ ಟುಗೆದರ್’ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರಭು (38) ಮತ್ತು ಲಕ್ಕಮ್ಮ (30) ಮೃತ ದುರ್ದೈವಿಗಳು. ಪ್ರಭು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ, ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು.
ಈ ಇಬ್ಬರು ವಾಸವಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಪರಿಶೀಲನೆ ನಡೆಸಿದರು. ಆಗ ಈ ಘಟನೆ ಬೆಳಕಿಗೆ ಬಂದಿದೆ.
ಈ ಜೋಡಿ ಮೃತಪಟ್ಟು ಮೂರರಿಂದ ನಾಲ್ಕು ದಿನ ಕಳೆದಿರಬಹುದು ಎಂದು ಊಹಿಸಲಾಗಿದೆ. ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಮಾಹಿತಿ ನೀಡಿದರು.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಈ ಜೋಡಿ ಆತ್ಮಹತ್ಯೆಗೆ ಏಕೆ ಬೆಚ್ಚು ಹಾಕಿದರೆಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.