
ಶಿವಮೊಗ್ಗ ಮೂಲದ ಮೂವರ ಪೈಕಿ ಓರ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಬಳಿ ಸಂಭವಿಸಿದೆ. ಕಳೆದ ಶನಿವಾರ ನಡೆದ ಘಟನೆಯಲ್ಲಿ ಅಪಘಾತಕ್ಕೀಡಾಗಿದ್ದ ಒರ್ವರು ಸಾವನ್ನಪ್ಪಿದ್ದಾರೆ. ಅವರನ್ನ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಸುಚೇತ ಹಾಗೂ ಸತೀಶ್ ಎಂಬಿಬ್ಬರು ಗಾಯಗೊಂಡಿದ್ದಾರೆ. ಇವರು ಶಿವಮೊಗ್ಗದ ಮೂಲದವರು ಎಂದು ತಿಳಿದು ಬಂದಿದೆ. ಹೊಳಲ್ಕೆರೆ ಹೊರವಲಯದ ಕಣಿವೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಂಜುನಾಥ್ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಊರಿನತ್ತ ಹೊರಟಿದ್ದರು ಎನ್ನಲಾಗಿದೆ.