March 14, 2025

ಕೆ ಆರ್ ಆಸ್ಪತ್ರೆಯಲ್ಲಿ ಓಪಿಡಿ ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ…..

Spread the love

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಶತಮಾನೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಸಂಸ್ಥೆಯಡಿ ಬರುವ ಕೆ. ಆರ್. ಆಸ್ಪತ್ರೆಯ ಆವರಣದಲ್ಲಿ ನೂತನ ಹೊರರೋಗಿ ವಿಭಾಗ (ಓಪಿಡಿ) ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಂತೆ, ಈ ಕಾಮಗಾರಿಯನ್ನು ರೂ. 75 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ನೂತನ ಓಪಿಡಿ ಕಟ್ಟಡದ ನಿರ್ಮಾಣವು ಆಸ್ಪತ್ರೆಯ ಸೇವಾ ಸಾಮರ್ಥ್ಯವನ್ನು ವೃದ್ಧಿಸಲಿದೆ ಹಾಗೂ ರೋಗಿಗಳಿಗೆ ಉತ್ತಮ ಮತ್ತು ಸುಧಾರಿತ ಆರೋಗ್ಯ ಸೇವೆಗಳನ್ನು ಒದಗಿಸಲು ನೆರವಾಗಲಿದೆ. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಈ ಶತಮಾನೋತ್ಸವದಲ್ಲಿ ಅನೆಕ ಹೊಸ ಯೋಜನೆಗಳನ್ನು ಕೈಗೊಂಡಿದ್ದು, ಈ ಒಪಿಡಿ ಕಟ್ಟಡವು ಅವುಗಳಲ್ಲಿ ಪ್ರಮುಖವಾದುದು.

ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ ನೀಡಿದ ಸಚಿವ ಸಂಪುಟ ನಿರ್ಣಯವು, ಮೈಸೂರಿನ ಆರೋಗ್ಯ ಸೇವೆ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ಈ ಯೋಜನೆಯು ಆಸ್ಪತ್ರೆಯ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ರೋಗಿಗಳಿಗೆ ಸುಲಭ, ವೇಗದ ಹಾಗೂ ಗುಣಮಟ್ಟದ ಚಿಕಿತ್ಸೆಯನ್ನು ನೀಡಲು ನೆರವಾಗಲಿದೆ.