
ತುಮಕೂರು
ತಿಪಟೂರು ತಾಲ್ಲೂಕಿನ ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1990ರಲ್ಲಿ ಪ್ರಾರಂಭವಾಗಿದೆ. ಈ ಶಾಲೆಯು ತಾಲ್ಲೂಕಿನ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಪರಿಣಮಿಸಿದ್ದು, ಆದರೆ ಮೂಲ ಸೌಕರ್ಯಗಳ ಕೊರತೆಯಿಂದ ಮಕ್ಕಳ ಜೀವ ಬಯದಿಂದ ಪಾಠ ಕೇಳುವಂತಾಗಿದೆ.

ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಳೆಯಲ್ಲಿ ನೆನೆದು, ಬಿಸಿಲಲ್ಲಿ ಒಣಗುತ್ತ, ಶಿಥಿಲಾವಸ್ಥೆಯ ಕಟ್ಟಡದಲ್ಲಿ ಆತಂಕದಿಂದ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ. ಒಂದು ರಿಂದ ಏಳನೇ ತರಗತಿಯವರೆಗೆ ಒಟ್ಟು 118 ವಿದ್ಯಾರ್ಥಿಗಳು ಇಲ್ಲಿ ದಾಖಲಾಗಿದ್ದಾರೆ.
ಶಿಕ್ಷಣ ಸಚಿವರೆ ತಕ್ಷಣವೇ ಇದಕ್ಕೆ ಸೂಕ್ತ ಪರಿಹಾರವನ್ನು
ಒದಗಿಸಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿ, ಅವರ ಶಿಕ್ಷಣಕ್ಕೆ ಉತ್ತಮ ವಾತಾವರಣವನ್ನು ಸೃಷ್ಟಿಸುವಂತೆ ಗ್ರಾಮದಲ್ಲಿನ ಸಾರ್ವಜನಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.✍️✍️✍️✍️