
ತುಮಕೂರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಮ್ಮ ಕ್ಲಿನಿಕ್‌ಗಳ ವೇಳಾಪಟ್ಟಿ ಬದಲಾವಣೆಗೊಂಡಿದೆ.
ಪ್ರಸ್ತುತ ಮರಳೂರು ದಿಣ್ಣೆ ಹಾಗೂ ದಿಟ್ಟೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್‌ಗಳು ಹೊಸ ವೇಳಾಪಟ್ಟಿಯ ಅನ್ವಯ ಮದ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ ಎಂದು ಡಿಎಚ್ ಓ ಡಾ. ಮಂಜುನಾಥ್ ತಿಳಿಸಿದ್ದಾರೆ.
ನಗರದಲ್ಲಿ ಒಟ್ಟು 7 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಬದಲಾವಣೆಯು ಹೆಚ್ಚಿನ ಜನತೆಗೆ ಉತ್ತಮ ಸೇವೆ ನೀಡಲು ಸರ್ಕಾರದ ಆದೇಶದಂತೆ ನಿರ್ಧರಿಸಲಾಗಿದೆ.
ಈ ಹೊಸ ವೇಳಾಪಟ್ಟಿಯು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲತೆ ಒದಗಿಸಲು ಮತ್ತು ಆರೋಗ್ಯ ಸೇವೆಗಳನ್ನು ಸುಗಮವಾಗಿ ಪಡೆಯಲು ಸಹಾಯವಾಗಲಿದೆ.
ಜಿಲ್ಲೆಯ ಜನರು ಈ ಬದಲಾವಣೆಯನ್ನು ಗಮನಿಸಿ, ತಮ್ಮ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಸಕಾಲದಲ್ಲಿ ಕ್ಲಿನಿಕ್‌ಗಳನ್ನು ಸಂಪರ್ಕಿಸಬಹುದಾಗಿದೆ.