
ಹಾಸನ :
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿಗೆ ಪತಿರಾಯ ಚಾಕುವಿನಿಂದ ಇರಿದಿರುವ ಘಟನೆ ಹಾಸನದ ಎಸ್ಪಿ ಕಚೇರಿ ಆವರಣದಲ್ಲಿಯೇ ನಡೆದಿದ್ದು, ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಎಂಬಾತನೇ ಪತ್ನಿ ಮಮತಾಗೆ ಚಾಕು ಇರಿದಿದ್ದು.
ಕಳೆದ ನಾಲೈದು ದಿನಗಳಿಂದ ದಂಪತಿಗಳ ನಡುವೆ ಜಗಳ ನಡೆಯುತ್ತಿತ್ತು. ಇಂದು ಪತ್ನಿ ಮಮತಾ, ಪತಿ ಲೋಕನಾಥ್ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದರು.
ಆದರೆ, ದೂರು ನೀಡುವ ವೇಳೆ ತೀವ್ರ ಕೋಪಕ್ಕೆ ಗುರಿಯಾದ ಪತಿ ಲೋಕನಾಥ್, ಎಸ್ಪಿ ಕಚೇರಿ ಆವರಣದಲ್ಲೇ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ. ಗಾಯಗೊಂಡ ಮಮತಾ ರವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಘಟನೆ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದು, ಲೋಕನಾಥ್ ಅವರನ್ನು ಬಂಧಿಸಲಾಗಿದೆ. ಪತ್ನಿಯನ್ನು ಹತ್ಯೆ ಮಾಡಿದ ಆರೋಪವು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ.
ಈ ಘಟನೆ ಹಾಸನದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಮಹಿಳಾ ಭದ್ರತೆ ಹಾಗೂ ಕುಟುಂಬ ಕಲಹದ ಪರಿಣಾಮಗಳು ಇಂತಹ ದುರಂತಕ್ಕೆ ದಾರಿ ಮಾಡಿಕೊಡಬಾರದು ಎಂಬ ವಾದಗಳು ಮುಂದೊಡ್ಡಲಾಗಿವೆ.