
ಗುಬ್ಬಿ :
ಈ ದಿನ ಪ್ರಾದೇಶಿಕ ವಲಯ ಗುಬ್ಬಿ ಹಾಗೂ ನಲ್ಲೂರು ಗ್ರಾಮ ಪಂಚಾಯಿತಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಮಕ್ಕಳರು, ಶಿಕ್ಷಕರು ಮತ್ತು ಗ್ರಾಮಸ್ಥರು ಸಕ್ರಿಯವಾಗಿ ಭಾಗವಹಿಸಿದ್ದರು.

ಅಧಿಕಾರಿಗಳು ವನಮಹೋತ್ಸವದ ಮಹತ್ವವನ್ನು ವಿವರಿಸಿದರು ಮತ್ತು ಪರಿಸರ ಸಂರಕ್ಷಣೆ ಕುರಿತಾದ ಹಲವಾರು ಮಾಹಿತಿ ಹಂಚಿಕೊಂಡರು. ಪ್ರತಿಯೊಬ್ಬರ ಮನೆಯ ಸುತ್ತಮುತ್ತ ಗಿಡಗಳನ್ನು ನೆಡುವುದರಿಂದ ಪರಿಸರದಲ್ಲಿ ತಾಪಮಾನವನ್ನು ನಿಯಂತ್ರಿಸಬಹುದು ಎಂಬ ಸಂದೇಶವನ್ನು ಮಕ್ಕಳಿಗೆ ಮತ್ತು ಗ್ರಾಮಸ್ಥರಿಗೆ ತಿಳಿಸಿದರು.
ಶಾಲಾ ಮಕ್ಕಳಿಗೆ ಗಿಡಗಳನ್ನು ನೆಡುವ ಮತ್ತು ಅವುಗಳನ್ನು ಪೋಷಿಸುವ ಬಗ್ಗೆ ಮಾಹಿತಿ ನೀಡಲಾಯಿತು. ಗಿಡಗಳ ಮಹತ್ವವನ್ನು ಅರ್ಥೈಸುವ ಮೂಲಕ, ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದ ಪ್ರಮುಖ ಭಾಗವಾಗಿ, ಶಾಲಾ ಆವರಣದಲ್ಲಿ ಮತ್ತು ಗ್ರಾಮದ ಮುಖ್ಯ ಪ್ರದೇಶಗಳಲ್ಲಿ ಹಲವಾರು ಹೂವಿನ ಗಿಡಗಳನ್ನು ಹಾಗೂ ಫಲದ ಗಿಡಗಳನ್ನು ನೆಟ್ಟರು.
ಪ್ರತಿವರ್ಷವೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪರಿಸರದ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಪರಿಸರ ಸ್ನೇಹಿ ಸಮಾಜವನ್ನು ನಿರ್ಮಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.