March 15, 2025

ಪಟ್ಟಣದ ಹೊರವಲಯದ ತಿಮ್ಮಕ್ಕ ಉದ್ಯಾನದಲ್ಲಿ ವನ ಮಹೋತ್ಸವ…

Spread the love

ಗುಬ್ಬಿ:
ಪಟ್ಟಣದ ಹೊರವಲಯದ ತಿಮ್ಮಕ್ಕ ಉದ್ಯಾನದಲ್ಲಿ ಬುಧವಾರ ನಡೆದ ವನ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ವಲಯ ಅರಣ್ಯಾಧಿಕಾರಿ ಸತೀಶ್ ಚಂದ್ರ ಮಾತನಾಡಿ, ಕೃಷಿ ಭೂಮಿ ವಿಸ್ತರಿಸುವ ಭರದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿಕೊಳ್ಳದೆ ಪರಿಸರ ಸಮತೋಲನ ಕಾಪಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಭೂಪ್ರದೇಶಕ್ಕೆ ಅಗತ್ಯ ಇರುವಷ್ಟು ಅರಣ್ಯವನ್ನು ಕಾಪಾಡಿಕೊಳ್ಳಲು ಹೆಚ್ಚು ಗಿಡ ಮರಗಳನ್ನು ನೆಟ್ಟು ಪೋಷಿಸಬೇಕಿದೆ ಎಂದು ತಹಶೀಲ್ದಾ‌ರ್ ಆರತಿ ಬಿ. ತಿಳಿಸಿದರು.

ಅರಣ್ಯನಾಶದಿಂದಾಗಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತಿದ್ದು, ಗಿಡಮರಗಳನ್ನು ಹೆಚ್ಚು ಬೆಳೆಸಿದಲ್ಲಿ ಮಾತ್ರ ಜಾಗತಿಕ ತಾಪಮಾನ ತಡೆಯಲು ಸಾಧ್ಯ. ಅರಣ್ಯ ನಾಶವಾದಂತೆ ಜನ, ಜಾನುವಾರುಗಳ ಸಂತತಿ ಕಡಿಮೆಯಾಗುತ್ತಾ ಮುಂದಿನ ದಿನಗಳಲ್ಲಿ ಭೀಕರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇಲಾಖೆ ಜೊತೆ ಸಾರ್ವಜನಿಕರು ಸಹಕರಿಸಿದಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳೆಸಲು ಸಾಧ್ಯ. ಸಾರ್ವಜನಿಕರು ಸಾಧ್ಯವಿರುವ ಕಡೆ ಸಸಿಗಳನ್ನು ನೆಟ್ಟು ಬೆಳೆಸಿದಲ್ಲಿ ಪ್ರಾಕೃತಿಕ ಸೌಂದರ್ಯದ ಜೊತೆಗೆ ಆರೋಗ್ಯಕರ ವಾತಾವರಣ ಕಾಪಾಡಿಕೊಳ್ಳಬಹುದು. ವನಮ- ಹೋತ್ಸವನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಅಭಿಯಾನ ನಡೆಸಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾ ದೇವಿ, ಕೃಷ್ಣಮೂರ್ತಿ, ಸಾಮಾಜಿಕ ಅರಣ್ಯ ಇಲಾಖೆಯ ಜಮೀ‌ರ್, ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.