
ತುಮಕೂರು
ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ತೆರೆಯಲಾದ ಬ್ಯಾಂಕ್ ಖಾತೆಗಳು ಯೋಜನೆ ಮುಕ್ತಾಯಗೊಂಡ ನಂತರವೂ ಚಲಾಯಿಸುತ್ತಿರುವುದು ಕಂಡು ಬಂದಿದೆ. ಇದು ಅನಗತ್ಯ ವೆಚ್ಚಕ್ಕೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ, ಅನಗತ್ಯ ಬ್ಯಾಂಕ್ ಖಾತೆಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿಗಳು ಜುಲೈ 31ರೊಳಗೆ ಅವುಗಳನ್ನು ರದ್ದುಪಡಿಸಲು ಕ್ರಮ ಕೈಗೊಂಡು, ಜಿಲ್ಲಾ ಪಂಚಾಯತಿಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಸೂಚಿಸಿದ್ದಾರೆ.
ಇದಕ್ಕಾಗಿ, ಜಿಲ್ಲಾ ಪಂಚಾಯಿತಿಯ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ, ಅತಿಯಾದ ಬ್ಯಾಂಕ್ ಖಾತೆಗಳ ನಿರ್ವಹಣೆ, ಅವುಗಳನ್ನು ರದ್ದುಪಡಿಸುವ ವಿಧಾನ ಮತ್ತು ಈ ಕಾರ್ಯವನ್ನು ಯಶಸ್ವಿಯಾಗಿ ಮುಗಿಸುವ ಮಾರ್ಗಗಳನ್ನು ಚರ್ಚಿಸಲಾಯಿತು. ಎಲ್ಲಾ ಅಧಿಕಾರಿಗಳಿಗೆ ಈ ಕುರಿತು ಸ್ಪಷ್ಟವಾದ ಮಾರ್ಗದರ್ಶನ ನೀಡಲಾಗಿದೆ.
ಗ್ರಾಮ ಪಂಚಾಯಿತಿಗಳು ಅನಗತ್ಯ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸುವ ಮೂಲಕ, ಆಡಳಿತಾತ್ಮಕ ಸುಧಾರಣೆಗಳನ್ನು ಸಕ್ರಿಯಗೊಳಿಸಬೇಕು ಮತ್ತು ಸಾರ್ವಜನಿಕ ಸಂಪತ್ತು ವ್ಯರ್ಥವಾಗದಂತೆ ಗಮನ ಹರಿಸಬೇಕು. ಈ ಕ್ರಮಗಳು ಗ್ರಾಮ ಪಂಚಾಯಿತಿಗಳ ಹಣಕಾಸು ಸ್ಥಿತಿಯನ್ನು ಸುಧಾರಿಸಲು ನೆರವಾಗಲಿವೆ ಎಂದು ತಿಳಿಸಿದರು.