March 14, 2025

ಗ್ರಾಮ ಪಂಚಾಯಿತಿ ಅಧ್ಯಕ್ಷನಾ ಮನೆಯಲ್ಲಿ 1.33 ಕೋಟಿ ರೂ ಅಕ್ರಮ ಆಸ್ತಿ..!?

Spread the love

ಶಿವಮೊಗ್ಗ  :

ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗೇಶ್ ಬಿ. ಅವರು ತಮ್ಮ ಮೂಲಗಳ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುತ್ತಾರೆಂಬ ದೂರಿನ ಮೇರೆಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ


ಈ ಪ್ರಕರಣದ ತನಿಖೆ ಕೈಗೊಂಡ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಜುಲೈ 19ರಂದು 5 ಸ್ಥಳಗಳಲ್ಲಿ ಶೋಧನೆ ನಡೆಸಿದರು. ಶೋಧನೆಯ ವೇಳೆ, 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ ಕೃಷಿ ಜಮೀನು, 12,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, 1,76,000 ರೂ. ಮೌಲ್ಯದ ವಾಹನಗಳು, 7,00,000 ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು 5,71,640 ರೂ. ನಗದು ಹಣ ಪತ್ತೆಯಾಗಿದೆ



ಈ ಎಲ್ಲಾ ಆಸ್ತಿಯ ಒಟ್ಟು ಮೌಲ್ಯ 1,33,87,826 ರೂ. ಎಂದು ಅಂದಾಜಿಸಲಾಗಿದೆ. ದಾಳಿ ಸಮಯದಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಚಿತ್ರದುರ್ಗ, ಉಡುಪಿ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದರು.

ಈ ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ಅವರು ದಾಖಲಿಸಿದ್ದಾರೆ. ವೀರಬಸಪ್ಪ ಎಲ್ ಕುಸಲಾಪುರ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿದ್ದಾರೆ.

ನಾಗೇಶ್ ಬಿ. ರವರ ಮನೆಯಲ್ಲಿ ಪತ್ತೆಯಾದ 5,00,000 ರೂ. ನಗದುವನ್ನು ತನಿಖೆ ಸಂಬಂಧ ಅಮಾನತ್ತುಪಡಿಸಲಾಗಿದೆ. ಈ ದಾಳಿ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.✍🏻