
ತುಮಕೂರು :
ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ (ಇಓ) ಭೇಟಿ ಹಾಗೂ ಪರಿಶೀಲನೆ ಸುತ್ತು ಯಶಸ್ವಿಯಾಗಿ ನಡೆದಿದ್ದು, ಹಲವಾರು ಉತ್ತಮ ಬೆಳವಣಿಗೆಗಳನ್ನು ಗಮನಿಸುವಂತಾಯಿತು. ಅಧಿಕಾರಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ವಿವಿಧ ಕಡತಗಳ ಪರಿಶೀಲನೆ ನಡೆಸಿದರು. ನಂತರ ವಡ್ಡಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುರಿತಂತೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸಾಧನೆಗಾಗಿ ಅಗತ್ಯ ಮಾರ್ಗದರ್ಶನ ನೀಡಿದರು.
ಇದರ ಜೊತೆಗೆ, ಅಧಿಕಾರಿಗಳು 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು, ಇದರಿಂದ ಮಕ್ಕಳು ಅವರಿಗೆ ಬರುವ ಪ್ರಶ್ನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಮತ್ತು ತಮ್ಮ ಆಕಾಂಕ್ಷೆಗಳನ್ನು ಪ್ರಸ್ತಾಪಿಸಲು ಅವಕಾಶ ಸಿಕ್ಕಿತು. ನಂತರ, ಅಧಿಕಾರಿಗಳು ಬಾಲೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿಯ ಪ್ರಗತಿಯಲ್ಲಿರುವ ಜೆಜೆಎಂ (ಜಲ್ ಜೀವನ್ ಮಿಷನ್) ಕಾಮಗಾರಿಯನ್ನು ವೀಕ್ಷಿಸಿದರು.
ಈ ರೀತಿಯ ಅಧಿಕಾರಿಗಳ ದಿಢೀರ್ ಭೇಟಿ ಮತ್ತು ಪರಿಶೀಲನೆಯಿಂದ ಗ್ರಾಮೀಣ ಪ್ರದೇಶದಲ್ಲಿ ವಿವಿಧ ಯೋಜನೆಗಳ ಪ್ರಗತಿ ಹಾಗೂ ಸಮುದಾಯದ ಸಕ್ರಿಯತೆಗೆ ಸಂಬಂಧಿಸಿದಂತೆ ಉತ್ತಮ ಬೆಳವಣಿಗೆಗಳು ಕಂಡುಬಂದಿವೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಇಂತಹ ಬೇಟಿಯ ಮೂಲಕ ಸರ್ಕಾರದ ಯೋಜನೆಗಳ ಕಾರ್ಯಾನ್ವಯತೆಯ ಮೇಲೆ ಅವಲೋಕನ ಮಾಡುವ ಮತ್ತು ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಗಮನ ಕೊಡಲು ಸಾಧ್ಯವಾಗಿದೆ.