
ಶಿವಮೊಗ್ಗ :
ಕುಂಸಿಯ ಮೆಸ್ಕಾಂ ಕ್ವಾಟ್ರಸ್‌ನಲ್ಲಿ ಮೆಸ್ಕಾಂ ಸಿಬ್ಬಂದಿ ನಂದೀಶ್ (38) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕುಟುಂಬದ ವಿಷಯವಾಗಿಯೋ ಅಥವಾ ಕೆಲಸದ ಒತ್ತಡದ ಕಾರಣವಾಗಿಯೋ ಈ ದಾರುಣ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ನಿಖರ ಕಾರಣವನ್ನು ತಿಳಿಯಲು ಪೊಲೀಸ್ ತನಿಖೆ ಮುಂದುವರೆದಿದೆ.
ನಂದೀಶ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ಇಂದು ಸಂಜೆ ನಡೆದಿದೆ ಎನ್ನಲಾಗಿದ್ದು, ಪ್ರಕರಣವನ್ನು ಎಫ್ಐಆರ್ ಅಥವಾ ಯುಡಿಆರ್ ರೂಪದಲ್ಲಿ ದಾಖಲಿಸಲಾಗುವ ಕುರಿತು ನಿರ್ಧಾರ ಕೈಗೊಳ್ಳಲಾಗುವ ಸಾಧ್ಯತೆ ಇದೆ….