
ತುಮಕೂರು :
ರಾಷ್ಟ್ರೀಯ ಹೆದ್ದಾರಿ 48 ರ ಕಡವಿಗೆರೆ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು-ಸಿರಾ ಮಾರ್ಗವಾಗಿ ಗದಗ್ ಜಿಲ್ಲೆಯ ಮುಂಡರ್ಗಿ ತಾಲ್ಲೂಕಿನ ಅಬ್ಬಿಗೇರಿ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು, ಮಂಜು ಕವಿದ ವಾತಾವರಣದ ಕಾರಣ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಗುದ್ದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳೀಯರು ಕೂಡಲೇ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣವನ್ನು ದಾಖಲಿಸಿದ್ದಾರೆ. ಘಟನೆಯ ಕಾರಣವಾಗಿ ಅತಿಯಾದ ಮಂಜು ಮತ್ತು ವೇಗ ನಿಯಂತ್ರಣದ ಕೊರತೆಯನ್ನು ಪ್ರಾಥಮಿಕವಾಗಿ ಗುರುತಿಸಲಾಗಿದೆ.