
ತುಮಕೂರು :
ಮಧುಗಿರಿಯ ರೈತರ ಕೃಷಿಹೊಂಡದಲ್ಲಿ ಸೋಡಿಯಂ ಬಾಂಬ್ ಬ್ಲಾಸ್ಟ್ ಮಾಡಿದ್ದ ಡೋನ್ ಪ್ರತಾಪ್ ವಿಡಿಯೋ ರಾಜ್ಯಾದ್ಯಂತ ವೈರಲ್ ಆಗಿದೆ. ಈ ವಿಡಿಯೋ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದಾನೆ.

ಮಿಡಿಗೇಶಿ ಪೊಲೀಸರು ಈ ವಿಡಿಯೋ ಆಧರಿಸಿ ತನಿಖೆ ಆರಂಭಿಸಿ, ಡೋನ್ ಪ್ರತಾಪ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡು ಎಫ್‌ಐಆರ್ ದಾಖಲಿಸಿದ್ದಾರೆ. ಸದ್ಯ, ಅವರನ್ನು ಗುರುವಾರ ಬೆಂಗಳೂರಿನಲ್ಲಿ ಬಂಧಿಸಿ ಮಿಡಿಗೇಶಿ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ಸಮಾಜ ಮಾಧ್ಯಮದಲ್ಲಿ ಜನರ ಗಮನ ಸೆಳೆಯಲು ಈ ರೀತಿಯ ಕೃತ್ಯಗಳನ್ನು ಪ್ರೋತ್ಸಾಹಿಸುವುದು ಅಪಾಯಕಾರಿಯಾಗಿದ್ದು, ಕಾನೂನುಬಾಹಿರ ಕೃತ್ಯಗಳ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮಂದಾಗಿದ್ದಾರೆ.