
ಬೆಂಗಳೂರು
ಸರ್ಕಾರಿ ಆಸ್ಪತ್ರೆಗಳು ಆರ್ಥಿಕವಾಗಿ ಹಿಂದೂಳಿದವರು ಮತ್ತು ಬಡ ಜನರ ಚಿಕಿತ್ಸೆಗೆ ಅನುಕೂಲವಾಗಲು ನಿರ್ಮಾಣಗೊಂಡಿವೆ. ಖಾಸಗಿ ಆಸ್ಪತ್ರೆಗಳ ವೆಚ್ಚವನ್ನು ಭರಿಸಲು ಆಗದವರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಹೋಗುತ್ತಾರೆ. ಆದರೆ, ಸರ್ಕಾರದ ಆಸ್ಪತ್ರೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ.
ಇದರ ಮಾದರಿಯಾಗಿ,ಟಿ ದಾಸರಹಳ್ಳಿ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯಲ್ಲಿನ ಒಬ್ಬ ನರ್ಸ್, ಹೆರಿಗೆ ಚಿಕಿತ್ಸೆಗೆ ಲಂಚವನ್ನು ಫೋನ್‌ಪೇ ಮೂಲಕ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಈ ಘಟನೆ ಸಾರ್ವಜನಿಕರು ಸರ್ಕಾರದ ಆಸ್ಪತ್ರೆಗಳ ಸೇವೆಗಳ ಬಗ್ಗೆ ನಂಬಿಕೆ ಕಳೆದುಕೊಳ್ಳುವಂತಾಗಿದೆ.
ಸರ್ಕಾರಿ ಆಸ್ಪತ್ರೆಗಳ ಉದ್ದೇಶವೇ ಬಡವರಿಗೆ ನೆರವಾಗುವುದು. ಆದರೆ, ಭ್ರಷ್ಟಾಚಾರವು ತಾಂಡವವಾಡಿದರೆ, ಸಹಾಯಕ್ಕೆ ಬರುವವರಿಗೇ ತೊಂದರೆ ಉಂಟಾಗುತ್ತದೆ. ಈ ಘಟನೆಗೆ ಸಂಬಂಧಿಸಿದ ತನಿಖೆ ಮುಂದುವರಿಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.