
ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆಗೆ ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ 2024ರ ಡಿಸೆಂಬರ್ 27ರಂದು (ಶುಕ್ರವಾರ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.
ಈ ಸಾರ್ವಜನಿಕ ರಜೆಯು ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರದ ಸ್ವಾಮ್ಯದ ಅಂಗಸಂಸ್ಥೆಗಳಿಗೆ ಅನ್ವಯಿಸುತ್ತದೆ. ಇದೇ ಸಂದರ್ಭದಲ್ಲಿ, ಡಿಸೆಂಬರ್ 26ರಿಂದ 2025ರ ಜನವರಿ 1ರವರೆಗೆ (7 ದಿನಗಳು) ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಾಗುವುದು.

ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
ಸರಕಾರದ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.
ನಿಗದಿತ ದಿನಾಂಕಕ್ಕೆ ಸಂಬಂಧಿಸಿದಂತೆ ಈ ರಜೆ ನೆಗೋಶಿಯಬಲ್ ಇನ್ಸುಮೆಂಟ್ ಆಕ್ಟ್, 1881 ರ ಪ್ರಕಾರ ಮಾನ್ಯತೆ ಪಡೆದಿರುವುದಾಗಿ ಘೋಷಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಶೋಕಾಚರಣೆಯಲ್ಲಿ ಪಾಲ್ಗೊಳ್ಳಬೇಕಾಗಿ ಕೋರಲಾಗಿದೆ.