
ಚಿಕ್ಕಮಗಳೂರು ಜಿಲ್ಲೆಯ ಮೆಣಸೆ ಗ್ರಾಪಂ ಶಿಡ್ಲೆ ಬಳಿ ಪ್ರವಾಸಿಗರ ವಾಹನಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಮಿಳುನಾಡಿನ ಧರ್ಮಪುರಿಯ ಭುವನ (65) ಎಂಬ ಮಹಿಳೆ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ದುರಂತದಲ್ಲಿ, ಬೆಂಗಳೂರಿನಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಟಿಟಿ ವಾಹನ ಮತ್ತು ಶೃಂಗೇರಿಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಎರಡೂ ವಾಹನಗಳು ಗಂಭೀರವಾಗಿ ಹಾನಿಗೊಳಗಾಗಿವೆ. ಸ್ಥಳೀಯರು ಮತ್ತು ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲು ನೆರವಾದರು. ಈ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಲಾಗಿದೆ.