
ತುಮಕೂರು :
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಠಾಣೆಗೆ ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಂದು ಪೊಲೀಸರಿಂದ ವೈದ್ಯಕೀಯ ಪರೀಕ್ಷೆ ನಂತರ ರಾಮಚಂದ್ರಪ್ಪನನ್ನು ಮಧುಗಿರಿ JMFC ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲು ಆದೇಶಿಸಿದರು.
ಘಟನೆ ಕುರಿತಂತೆ ಮಹಿಳೆ ನೀಡಿದ ದೂರಿನ ಮೇರೆಗೆ ಮೊದಲು ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಡಿವೈಎಸ್ಪಿ ರಾಮಚಂದ್ರಪ್ಪನ ವಿರುದ್ಧ ಪ್ರಕರಣ ದಾಖಲಿಸಿ, ಅರೆಸ್ಟ್ ಮಾಡಿದ್ದರು.
ಈ ಪ್ರಕರಣವು ಪೊಲೀಸ್ ಇಲಾಖೆಯ ಒಳಾಂಗಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದ್ದು, ಸಾರ್ವಜನಿಕರು ಗಂಭೀರವಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯನಿರ್ಣಯ ಪಡೆಯುವ ನಿರೀಕ್ಷೆ ಹೊಂದಿದ್ದಾರೆ.