
ಬೆಂಗಳೂರು: ದಾಂಪತ್ಯ ಜೀವನದಲ್ಲಿ ಉಂಟಾದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ನವವಿವಾಹಿತ ಪೊಲೀಸ್ ಕಾನ್ಸೆಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ಗೋವಿಂದ ಎಂದು ಗುರುತಿಸಲಾಗಿದೆ.
ಇತ್ತೀಚಿಗೆ ಮದುವೆಯಾದ ಗೋವಿಂದ, ಕೌಟುಂಬಿಕ ಕಲಹದಿಂದ ಮನನೊಂದಿದ್ದರು ಎಂದು ತಿಳಿದುಬಂದಿದೆ. ಅವರು ನಗರದ ಪೊಲೀಸ್ ಕ್ವಾಟರ್ಸ್‌ನಲ್ಲಿ ವಾಸಿಸುತ್ತಿದ್ದರು.ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಗೋವಿಂದ ಅವರು ವ್ಯಕ್ತಿತ್ವದಲ್ಲಿ ಸರಳವಾಗಿದ್ದರೂ, ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಟುಂಬ ಕಲಹವೇ ಈ ಕೃತ್ಯದ ಪ್ರಮುಖ ಕಾರಣವಾಗಿ ನೋಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ವಿವೇಕನಗರ ಪೊಲೀಸರು, ಈ ಘಟನೆಗೆ ಸಂಬಂಧಿಸಿದಂತೆ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಈ ಘಟನೆ ಪೊಲೀಸರಿಗೆ ಭಾರೀ ಆಘಾತ ನೀಡಿದ್ದು, ಸಾವಿನ ಹಿನ್ನೆಲೆ ಕುರಿತು ಆಳವಾದ ತನಿಖೆ ನಡೆಯುತ್ತಿದೆ.