March 14, 2025

ಕಲಬುರಗಿ: ರಾಷ್ಟ್ರಧ್ವಜಕ್ಕೆ ಅಪಮಾನ ಪ್ರಕರಣ ದಾಖಲು .!?

Spread the love



ಕಲಬುರಗಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಶೇಖ ರೋಜಾ ದರ್ಗಾದ ಆವರಣದಲ್ಲಿ ನಿನ್ನೆ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇಳೆ, ರಾಷ್ಟ್ರಧ್ವಜ ಸ್ಥಂಭದಲ್ಲಿ ಮುಸ್ಲಿಮ್ ಧ್ವಜಾರೋಹಣ ಮಾಡಲಾಗಿದೆ ಎಂಬ ಪೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಪೋಟೊಗೆ ಸಂಬಂಧಿಸಿದಂತೆ ದೇಶಪ್ರೇಮಿಗಳನ್ನು ಕಳವಳಗೊಳಿಸಿದ್ದು, ಇಂತಹ ಕೃತ್ಯದಿಂದ ರಾಷ್ಟ್ರಧ್ವಜಕ್ಕೆ ಅವಮಾನವಾಗುತ್ತದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಥೋರಿಟಿ ತಕ್ಷಣ ಮಧ್ಯಸ್ಥಿಕೆ ವಹಿಸಿ, ಘಟನೆಗೆ ಸಂಬಂಧಿಸಿದಂತೆ ಶೇಖ ರೋಜಾದ ದರ್ಗಾ ಆವರಣದಲ್ಲಿ ಘಟನೆ ನಡೆದಿದ್ದು, ಅಲ್ಲಿಯೇ ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜವನ್ನು ಇಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಧಿಕಾರಿಗಳು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ವ್ಯತಿರಿಕ್ತ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಆರೋಪಗಳು ಸತ್ಯಾಸತ್ಯತೆ ತಿಳಿಯಲು ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.