
ದಾವಣಗೆರೆ :
ಮೂರು ಐಜಿಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಡಾ. ಬಿ.ಆರ್.ರವಿಕಾಂತೇಗೌಡ, ಎನ್. ಸತೀಶ್ ಕುಮಾರ್ ಹಾಗೂ ಬಿ. ರಮೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎನ್. ಸತೀಶ್ ಕುಮಾರ್ ಅವರನ್ನು ಬೆಂಗಳೂರು ಕೇಂದ್ರ ಕಚೇರಿ ಐಜಿಪಿಯಾಗಿ ನಿಯೋಜಿಸಲಾಗಿದೆ. ಈ ಹಿಂದೆ ಬೆಂಗಳೂರು ಕೇಂದ್ರ ಕಚೇರಿ ಐಜಿಪಿಯಾಗಿದ್ದ ಡಾ. ಬಿ.ಆರ್. ರವಿಕಾಂತೇಗೌಡ ಅವರನ್ನು ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಈ ನಡುವೆ ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ. ರಮೇಶ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗದ ಜಂಟಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಬದಲಾವಣೆಗಳೊಂದಿಗೆ ಪೊಲೀಸ್ ಇಲಾಖೆಯ ಕಾರ್ಯಾಚರಣೆಗಳಲ್ಲಿ ಹೊಸ ಆಯಾಮಗಳನ್ನು ನಿರೀಕ್ಷಿಸಲಾಗಿದೆ.