March 14, 2025

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ದರೋಡೆ: ಇಬ್ಬರು ಆರೋಪಿಗಳು ಬಂಧಿತರು..

Spread the love

ಬೆಂಗಳೂರು :

ಕೆ.ಆರ್. ಮಾರುಕಟ್ಟೆ ಗೋಡೌನ್ ಸ್ಟ್ರೀಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ತಮಿಳುನಾಡು ಮೂಲದ 37 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಗಣೇಶ್ (23) ಮತ್ತು ಶರವಣ (35) ಎಂದು ಗುರುತಿಸಲಾಗಿದೆ.

ಜನವರಿ 19 ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದೆ. ಈ ವೇಳೆ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳು 650 ರೂ. ನಗದು, ಚಿನ್ನದ ತಾಳಿ, ಓಲೆ, ಬೆಳ್ಳು ಕಾಲು ಚೈನ್ ಮತ್ತು ಮೊಬೈಲ್‌ ಅನ್ನು ದೋಚಿ ಪರಾರಿಯಾಗಿದ್ದರು.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ಕೇಂದ್ರ ವಿಭಾಗದ ಮಹಿಳಾ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ, ಈ ಇಬ್ಬರ ವಿರುದ್ಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ಇರುವುದು ಪತ್ತೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಯುತ್ತಿದೆ.