March 14, 2025

ಹಿರಿಯಡಕ PSI ಸಿಬ್ಬಂದಿಯಿಂದ ದಲಿತ ವ್ಯಕ್ತಿಗೆ ದೌರ್ಜನ್ಯ: ಸಮಾಜ ಕಲ್ಯಾಣ ಆಯುಕ್ತರಿಗೆ ಪತ್ರಕರ್ತರ ಮನವಿ…!?

Spread the love



ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆಯ PSI ಸಿಬ್ಬಂದಿಯಿಂದ ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆದಿರುವುದಕ್ಕೆ ಸಂಬಂಧಿಸಿದಂತೆ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದ ವತಿಯಿಂದ ಸಮಾಜ ಕಲ್ಯಾಣ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಮನವಿ ಸಲ್ಲಿಕೆಯ ಸಂದರ್ಭದಲ್ಲಿ ರಾಜ್ಯದ ಅಧ್ಯಕ್ಷರಾದ ಶಶಿಕಾಂತ್ ಕಾಂಬ್ಳೆ, ಬೆಂಗಳೂರು ನಗರದ ಗೌರವ ಅಧ್ಯಕ್ಷರಾದ ಯಶಶ್ವಿನಿ ಬಿ, ಹಾಗೂ ಸಲಹಾ ಸಮಿತಿ ಅಧ್ಯಕ್ಷರಾದ ಸಂಜಯ್ ಸಾವಂತ್  ಮತ್ತು ಬೆಂಗಳೂರು ವಿಭಾಗೀಯ ಅಧ್ಯಕ್ಷರಾದ ವಿಜಯ್ ಮುನಿಯಪ್ಪ, ರಾಮನಗರ ಜಿಲ್ಲಾ ಅಧ್ಯಕ್ಷರು ಅಭಿಲಾಷ್, ಮೈಸೂರು ಜಿಲ್ಲಾಧ್ಯಕ್ಷರಾದ ಕೀರ್ತಿಕೇಶ್ ರವರು ಹಾಜರಿದ್ದರು .

ಈ ಸಂದರ್ಭದಲ್ಲಿ ಸಂಘದ ರಾಜ್ಯ ಅಧ್ಯಕ್ಷ ಶಶಿಕಾಂತ್ ಕಾಂಬ್ಳೆ ಮಾತನಾಡಿ, ರಾಜ್ಯದಲ್ಲಿ ದಲಿತರು ಮತ್ತು ಪತ್ರಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅವರು, “ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಘಟನೆಗಳನ್ನು ತಡೆಯಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪತ್ರಕರ್ತರು ಹಾಗೂ ಅವರ ಕುಟುಂಬಗಳ ಮೇಲಿನ ಹಲ್ಲೆಗಳಿಗೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಹಿಸಿದ್ದಾರೆ.

ಈ ಮನವಿ ಮೂಲಕ ಸಮಾಜದ ಅಸಮಾನತೆ ಮತ್ತು ದೌರ್ಜನ್ಯವನ್ನು ವಿರೋಧಿಸಿ ಉಗ್ರ ಹೋರಾಟವನ್ನು ನಡೆಸುವುದಾಗಿ ಶಶಿಕಾಂತ್ ಕಾಂಬ್ಳೆ ಹೇಳಿದ್ದಾರೆ. ಅವರ ಪ್ರಕಾರ, ದಲಿತರ ಹಕ್ಕುಗಳನ್ನು ಕಾಯ್ದುಕೊಳ್ಳಲು ಸಂಘವು ಕಾನೂನು ಹೋರಾಟವನ್ನು ಮುಂದುವರಿಸಲಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ…✍️