
ಮಂಡ್ಯ:
ಮಳವಳ್ಳಿ ತಾಲ್ಲೂಕಿನ ಕೊನ್ನಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ತತ್ತರಿಸಿ ತಾಯಿ ಪ್ರೇಮ ಮತ್ತು ಮಗ ರಂಜಿತ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಆತಂಕ ಸೃಷ್ಟಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮೃತರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಅನ್ನದಾನಿ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಹೆಚ್.ಆರ್. ಅಶೋಕ್ ಕುಮಾರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಇಂದ್ರೇಶ್, ಪ್ರಧಾನ ಕಾರ್ಯದರ್ಶಿ ಶ್ರೀಧರ್, ಪುರಸಭಾ ಅಧ್ಯಕ್ಷ ಪುಟ್ಟಸ್ವಾಮಿ, ತಾಲ್ಲೂಕು ಅಧ್ಯಕ್ಷ ಕೃಷ್ಣ ಮತ್ತು ಹಲವರು ಉಪಸ್ಥಿತರಿದ್ದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಅತಿಯಾದ ಕಿರುಕುಳವೇ ಈ ದುರ್ಘಟನೆಯ ಪ್ರಮುಖ ಕಾರಣವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕೂಡಲೇ ಈ ಕುರಿತಂತೆ ಕ್ರಮ ತೆಗೆದುಕೊಳ್ಳಬೇಕು, ಮೇಲ್ದರ್ಜೆಯ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ. ಮೃತರ ಕುಟುಂಬಕ್ಕೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯ ನಾಯಕರು ಆಗ್ರಹಿಸಿದ್ದಾರೆ.