
ಉಡುಪಿಯಲ್ಲಿ ದಲಿತ ವ್ಯಕ್ತಿಯ ಮೇಲೆ ನಡೆದ ಹಲ್ಲೆಯ ಪ್ರಕರಣದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸರ ನಿರ್ಲಕ್ಷ್ಯತೆಯಿಂದ ದಲಿತ ಸಮುದಾಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಲ್ಲೆಯ ನಂತರ 17 ದಿನಗಳಾದರೂ ನ್ಯಾಯ ದೊರಕದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಸಿಗದೆ, ದಲಿತ ಸಂಘಟನೆಗಳು ಮತ್ತು ಸಾಮಾಜಿಕ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತದ ಈ ನಿರ್ಲಕ್ಷ್ಯತೆ ದಲಿತ ವಿರೋಧಿ ನಿಲುವನ್ನು ಪ್ರತಿಬಿಂಬಿಸುತ್ತದೆ ಎಂಬ ಗಂಭೀರ ಆರೋಪವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಟನೆ, ಭೀಮವಾದ ದಲಿತ ಸಂಘರ್ಷ ಸಮಿತಿ, ನಿರ್ಧಾರ ಮಾಡಿದ್ದಾರೆ. ಹಾಗೂ ಲಾರಿ ಚಾಲಕರು ಮತ್ತು ಮಾಲಕರ ಸಂಘಟನೆ ಸೇರಿದಂತೆ ಹಲವಾರು ಸಂಘಟನೆಗಳಿಗಳು ದಲಿತರಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಉಡುಪಿಯಲ್ಲಿ ಅನಿರ್ದಿಷ್ಟ ಪ್ರತಿಭಟನೆಗೆ ಕರೆ ನೀಡಲಾಗಿದೆ.
ನ್ಯಾಯಕ್ಕಾಗಿ ಹೋರಾಟ – ನಮ್ಮ ಹಕ್ಕು, ನಮ್ಮ ಹೊಣೆ!
ಪ್ರತಿಭಟನೆಯಲ್ಲಿ ದಲಿತ ಸಮುದಾಯದವರು ಮಾತ್ರವಲ್ಲದೆ, ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಟ ಮಾಡುವ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಸಂಘಟನೆಗಳು ಮನವಿ ಮಾಡಿವೆ. “ನ್ಯಾಯ ದೊರಕುವವರೆಗೆ ಹೋರಾಟ ಮುಂದುವರಿಯುವುದು” ಎಂಬ ದೃಢ ಸಂಕಲ್ಪದೊಂದಿಗೆ ಜಿಲ್ಲಾಡಳಿತದ ನಿರ್ಲಕ್ಷ್ಯ ಮತ್ತು ಸರ್ಕಾರದ ಉದಾಸೀನತೆಗೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ.
ಸಾರ್ವಜನಿಕರಿಗೆ ಕರೆ:
ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯಸ್ಥಾಪನೆಯ ಅಗತ್ಯವನ್ನು ಮರುಸ್ಥಾಪಿಸಲು, ಉಡುಪಿಯಲ್ಲಿ ನಡೆಯುತ್ತಿರುವ ದಲಿತ ವಿರೋಧಿ ನಡೆಗಳ ವಿರುದ್ಧ ಪ್ರತಿಯೊಬ್ಬರೂ ಕೈಜೋಡಿಸಬೇಕು. ದಲಿತ ಸಮುದಾಯದ ಹಕ್ಕುಗಳ ಕಾಪಾಡುವ ನಿಟ್ಟಿನಲ್ಲಿ ಈ ಹೋರಾಟ ಮುಖ್ಯವಾದದ್ದು. ಆದ್ದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ದಲಿತ ಬಾಂಧವರು ಹಾಗೂ ನ್ಯಾಯ ಪ್ರಿಯ ನಾಗರಿಕರು ಪಾಲ್ಗೊಳ್ಳುವಂತೆ ಸಂಘಟನೆಗಳು ಕರೆ ನೀಡಿವೆ.
ವರದಿ: ಆರತಿ ಗಿಳಿಯಾರ್