March 14, 2025

ಶಿವರಾಜು.ಎಂ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ,!

Spread the love



ಬೆಂಗಳೂರು :ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘ (ರಿ.) ಬೆಂಗಳೂರು ಇದರ ಉಡುಪಿ ಜಿಲ್ಲಾಧ್ಯಕ್ಷರಾದ ಶಿವರಾಜು.ಎಂ, ಉದ್ಯಾವರ ಗ್ರಾಮ ಪಂಚಾಯತ್ ಗ್ರೇಡ್-1 ಕಾರ್ಯದರ್ಶಿ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಸಂಘದ ರಾಜ್ಯಾಧ್ಯಕ್ಷ ಎಂ. ಸುರೇಶ್ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿವರಾಜು.ಎಂ ಅವರು, ಈ ಹುದ್ದೆಗೆ ನೇಮಕಗೊಂಡಿರುವುದು ಸಂಘದ ಸಂಘಟನಾ ಬಲವನ್ನು ಮತ್ತಷ್ಟು ವೃದ್ಧಿಸಲು ಪೂರಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ರಾಜ್ಯ ಮಟ್ಟದ ಆಡಳಿತದಲ್ಲಿ ಅವರ ಅನುಭವ ಮತ್ತು ಸೇವಾ ಮನೋಭಾವ ಉಪಯುಕ್ತವಾಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಈ ಹೊಸ ಜವಾಬ್ದಾರಿಯನ್ನು ಕೈಗೆತ್ತಿಕೊಂಡಿರುವ ಶಿವರಾಜು.ಎಂ ಅವರು, ಸಂಘದ ಸಿದ್ಧಾಂತಗಳಿಗೆ ಅನುಗುಣವಾಗಿ ಅಧಿಕಾರಿಗಳ ಹಿತಾಸಕ್ತಿಗಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಿಂದ ರಾಜ್ಯ ಮಟ್ಟದ ಪ್ರಮುಖ ಹುದ್ದೆಗೆ ಆಯ್ಕೆಯಾಗಿರುವುದು ಜಿಲ್ಲೆ ಮತ್ತು ಸಂಘದ ಸದಸ್ಯರಿಗೂ ಹೆಮ್ಮೆ ತಂದಿದೆ.

ವರದಿ: ಆರತಿ ಗಿಳಿಯಾರು, ಉಡುಪಿ ಜಿಲ್ಲೆ