March 14, 2025

ತೀರ್ಥಹಳ್ಳಿ: ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು.!?

Spread the love

ಶಿವಮೊಗ್ಗ ಜಿಲ್ಲೆ :



ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಯುವತಿಯೊಬ್ಬಳು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ಇಂದು ಸಂಜೆ ನಡೆದಿದೆ. ಈ ಅಪಘಾತದಲ್ಲಿ ಸ್ಕೂಟಿ ಹಾಗೂ ಕಾರಿನ ನಡುವೆ ಭಾರೀ ಡಿಕ್ಕಿ ಸಂಭವಿಸಿದೆ.

ಪರಿಣಾಮ ಕಾರಿನ ಟಯರ್ ಯುವತಿಯ ಮೈಮೇಲೆ ಹರಿದಿದ್ದು, ತೀವ್ರ ಗಾಯಗಳೊಂದಿಗೆ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ. ಈ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತ ಯುವತಿಯ ಗುರುತು ಹಾಗೂ ಅಪಘಾತದ ಸೂಕ್ತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸರು ಆಗಮಿಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ. ಅಪಘಾತದ ನಿಖರ ಕಾರಣ ಮತ್ತು ವಾಹನ ಚಾಲಕರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸರು ಕೋರಿದ್ದಾರೆ.