March 14, 2025

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದಲ್ಲಿ ಹೊಸ ನೇಮಕಾತಿ: ಯಶಸ್ವಿನಿ ಬಿ ರಾಜ್ಯ ಸಂಘಟನಾ ಸಂಚಾಲಕರಾಗಿ ಆಯ್ಕೆ..

Spread the love


ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ ಶಶಿಕಾಂತ್ ರವರು ಇಂದು ಶ್ರೀಮತಿ ಯಶಸ್ವಿನಿ ಬಿ ಅವರನ್ನು ರಾಜ್ಯ ಸಂಘಟನಾ ಸಂಚಾಲಕರನ್ನಾಗಿ ನೇಮಕ ಮಾಡಿದ್ದಾರೆ. ಈ ಮಹತ್ವಪೂರ್ಣ ನೇಮಕಾತಿ ಸಂಘದ ಕಾರ್ಯಚಟುವಟಿಕೆಗಳಿಗೆ ಹೊಸ ಚೈತನ್ಯವನ್ನು ನೀಡಲಿದೆ ಎನ್ನುವುದು ಸದಸ್ಯರ ನಿರೀಕ್ಷೆ.



ಈ ಶುಭ ಸಂದರ್ಭದಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸಂಜಯ್ ಅವರು ಹಾಗೂ ಬೆಂಗಳೂರು ವಿಭಾಗದ ಅಧ್ಯಕ್ಷರಾದ ವಿಜಯ್ ಮುನಿಯಪ್ಪ ಅವರು ಉಪಸ್ಥಿತರಿದ್ದು, ಯಶಸ್ವಿನಿ ಬಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಹಲವು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು ಮತ್ತು ಹೊಸ ನೇಮಕಾತಿಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು



ಯಶಸ್ವಿನಿ ಬಿ ಅವರು ತಮ್ಮ ನೇಮಕಾತಿಗೆ ಧನ್ಯವಾದ ಸಲ್ಲಿಸಿ, ಸಂಘದ ಅಭಿವೃದ್ಧಿಗೆ ತಮ್ಮ ಶ್ರಮವನ್ನು ಅರ್ಪಿಸುವ ನಿರ್ಧಾರವನ್ನು ಪ್ರಕಟಿಸಿದರು. “ನಮ್ಮ ಸಂಘದ ಉದ್ದೇಶಗಳ ಸಾಧನೆಗಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತೇನೆ,” ಎಂದು ಅವರು ಹೇಳಿದರು.

ಸಂಘದ ಈ ಹೊಸ ಆಯ್ಕೆ ಮೂಲಕ ಪತ್ರಕರ್ತರ ಹಿತಸಾಧನೆಗೆ ಹೆಚ್ಚು ಗಮನ ನೀಡಲಾಗುವುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ.