
ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘಟನೆಯ ಉಡುಪಿಯ ಜಿಲ್ಲಾ ಕಚೇರಿಯ ಉದ್ಘಾಟನಾ ಸಮಾರಂಭ ದಿನಾಂಕ 12.03.2025ರಂದು ವಿಜೃಂಭಣೆಯಿಂದ ನಡೆಯಲಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರರಾದ ಮಾನ್ಯ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಉದ್ಘಾಟನಾ ಸಮಾರಂಭವನ್ನು ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಡಾ. ಕೆ. ವಿದ್ಯಾ ಕುಮಾರಿ ಅವರಿಂದ ನೆರವೇರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಮಾಜಿ ಸಂಸದರಾದ ಜಯಪ್ರಕಾಶ್ ಹೆಗಡೆ, ಕಾಂಗ್ರೆಸ್ ಮುಖಂಡರಾದ ಪ್ರಸಾದ ರಾಜ್ ಕಾಂಚನ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಶಶಿಕಾಂತ್ ಆ. ಕಾಂಬಳೆ, ಕಾನೂನು ಸಲಹೆಗಾರರಾದ ಚಿದಾನಂದ್ ಸರಿಕಾರ, ರಾಜ್ಯ ಸಂಘಟನಾ ಸಂಚಾಲಕರಾದ ಶ್ರೀಮತಿ ಯಶಸ್ವಿನಿ ಬಿ, ಸಲಹಾ ಸಮಿತಿಯ ಅಧ್ಯಕ್ಷರಾದ ಸಂಜಯ್ ಸಾವಂತ್ ಉಪಸ್ಥಿತರಿರಲಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಘಟನೆಯ ಪದಾಧಿಕಾರಿಗಳು, ಪತ್ರಕರ್ತರು, ಹಾಗೂ ಗೌರವಾನ್ವಿತ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರಿಂದ ವಿನಂತಿ ಮಾಡಲಾಗಿದೆ.
– ವರದಿ: ಆರತಿ ಗಿಳಿಯಾರ್